Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:35 - ಕನ್ನಡ ಸತ್ಯವೇದವು C.L. Bible (BSI)

35 ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:35
41 ತಿಳಿವುಗಳ ಹೋಲಿಕೆ  

ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು.


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು