Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:37 - ಕನ್ನಡ ಸತ್ಯವೇದವು C.L. Bible (BSI)

37 ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:37
31 ತಿಳಿವುಗಳ ಹೋಲಿಕೆ  

ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.


ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು