Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:4 - ಕನ್ನಡ ಸತ್ಯವೇದವು C.L. Bible (BSI)

4 “ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸೊಂಪಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:4
13 ತಿಳಿವುಗಳ ಹೋಲಿಕೆ  

“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು