ದಾನಿಯೇಲ 4:6 - ಕನ್ನಡ ಸತ್ಯವೇದವು C.L. Bible (BSI)6 ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರತರುವ ಹಾಗೆ ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅದಕ್ಕಾಗಿ ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕರೆತರಬೇಕೆಂದು ಆಜ್ಞೆಯನ್ನು ಕೊಟ್ಟೆ. ಅವರು ನನ್ನ ಕನಸಿನ ಅರ್ಥವನ್ನು ತಿಳಿಸಲಿ ಎಂಬುದೇ ನನ್ನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿ |
ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.