Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:11
19 ತಿಳಿವುಗಳ ಹೋಲಿಕೆ  

‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.


ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


“ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು.


ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.


ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು.


ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು