Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:13 - ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:13
20 ತಿಳಿವುಗಳ ಹೋಲಿಕೆ  

ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು.


ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.


ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ದಾನಿಯೇಲನು ರಾಜ ಸೈರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.


ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು.


ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.


ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು