Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:14 - ಕನ್ನಡ ಸತ್ಯವೇದವು C.L. Bible (BSI)

14 ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿದೆ ಎಂದು ನಾನು ಕೇಳಿದ್ದೇನೆ. ನೀನು ರಹಸ್ಯವನ್ನು ತಿಳಿದುಕೊಳ್ಳಬಲ್ಲವನು, ಬಹಳ ಚಾಣಾಕ್ಷನು ಮತ್ತು ಬುದ್ಧಿವಂತನೆಂದು ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:14
8 ತಿಳಿವುಗಳ ಹೋಲಿಕೆ  

ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.


ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು