16 ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.
16 ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
16 ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.
16 ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.
ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.
ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.
ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.
ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.