Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:18 - ಕನ್ನಡ ಸತ್ಯವೇದವು C.L. Bible (BSI)

18 ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:18
25 ತಿಳಿವುಗಳ ಹೋಲಿಕೆ  

ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:


ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?


ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು