ದಾನಿಯೇಲ 5:19 - ಕನ್ನಡ ಸತ್ಯವೇದವು C.L. Bible (BSI)19 ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!