Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:2 - ಕನ್ನಡ ಸತ್ಯವೇದವು C.L. Bible (BSI)

2 ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:2
23 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆ ಮಾಡಿಕೊಂಡನು; ಆಕೆ ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.


ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.


ಬಂಗಾರದ ಪೂಜಾ ಪಾತ್ರೆಗಳನ್ನು ತರಿಸಿದ. ರಾಜನೂ ಅವನ ಪ್ರಮುಖರೂ ಪತ್ನಿ - ಉಪಪತ್ನಿಯರೂ ಅವುಗಳಲ್ಲಿ ಕುಡಿದರು.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು