ದಾನಿಯೇಲ 5:29 - ಕನ್ನಡ ಸತ್ಯವೇದವು C.L. Bible (BSI)29 ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು. ಅಧ್ಯಾಯವನ್ನು ನೋಡಿ |
ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.