ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.