Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:7 - ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:7
28 ತಿಳಿವುಗಳ ಹೋಲಿಕೆ  

ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.


ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.


“ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.


ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.


ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು