Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:9
12 ತಿಳಿವುಗಳ ಹೋಲಿಕೆ  

ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?


ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು