Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:10 - ಕನ್ನಡ ಸತ್ಯವೇದವು C.L. Bible (BSI)

10 ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:10
47 ತಿಳಿವುಗಳ ಹೋಲಿಕೆ  

ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.


“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.


ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.


ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.


ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:


ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು