Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:11 - ಕನ್ನಡ ಸತ್ಯವೇದವು C.L. Bible (BSI)

11 ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುವದನ್ನು ಕಂಡು ಸನ್ನಿಧಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಆ ಜನರು ಗುಂಪಾಗಿ ಹೋಗಿ ದಾನಿಯೇಲನನ್ನು ನೋಡಿದರು. ದಾನಿಯೇಲನು ದೇವರಲ್ಲಿ ಪ್ರಾರ್ಥಿಸಿ ಸಹಾಯ ಕೋರುತ್ತಿರುವದನ್ನು ಅವರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:11
7 ತಿಳಿವುಗಳ ಹೋಲಿಕೆ  

ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ನೀತಿಯುತ ನಿನ್ನ ವಿಧಿಗಳ ನಿಮಿತ್ತ I ಸ್ತುತಿಪೆ ನಿನ್ನ ದಿನಕ್ಕೆ ಏಳುಕಿತ್ತಾ II


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು