ದಾನಿಯೇಲ 6:14 - ಕನ್ನಡ ಸತ್ಯವೇದವು C.L. Bible (BSI)14 ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು. ಅಧ್ಯಾಯವನ್ನು ನೋಡಿ |