Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:19 - ಕನ್ನಡ ಸತ್ಯವೇದವು C.L. Bible (BSI)

19 ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರುದಿನ ಬೆಳಿಗ್ಗೆ ಸೂರ್ಯೋದಯದ ಹೊತ್ತಿಗೆ ರಾಜನಾದ ದಾರ್ಯಾವೆಷನು ಎದ್ದನು. ಅವನು ಸಿಂಹಗಳ ಗುಹೆಗೆ ಬೇಗಬೇಗನೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:19
6 ತಿಳಿವುಗಳ ಹೋಲಿಕೆ  

ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ಭಾನುವಾರ ಮುಂಜಾನೆ ಬೇಗನೆ ಹೊರಟು ಸೂರ್ಯೋದಯ ಸಮಯಕ್ಕೆ ಸಮಾಧಿಯನ್ನು ತಲುಪಿದರು.


‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು