Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:27 - ಕನ್ನಡ ಸತ್ಯವೇದವು C.L. Bible (BSI)

27 ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:27
23 ತಿಳಿವುಗಳ ಹೋಲಿಕೆ  

ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು