Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:4
32 ತಿಳಿವುಗಳ ಹೋಲಿಕೆ  

ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.


ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು