ದಾನಿಯೇಲ 6:8 - ಕನ್ನಡ ಸತ್ಯವೇದವು C.L. Bible (BSI)8 ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿ |
ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.