Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:1 - ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:1
34 ತಿಳಿವುಗಳ ಹೋಲಿಕೆ  

ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.


ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.


ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.


ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು.


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


“ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.


ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ).


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.


‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು