Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:10 - ಕನ್ನಡ ಸತ್ಯವೇದವು C.L. Bible (BSI)

10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:10
26 ತಿಳಿವುಗಳ ಹೋಲಿಕೆ  

ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?


ಪ್ರಭುವನು ಭಜಿಸಿರಿ ಆತನ ಸೇನೆಗಳೇ I ಭಜಿಸಿ ಪ್ರಭುವನು, ಓ ಎನ್ನಮನವೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು