ದಾನಿಯೇಲ 7:11 - ಕನ್ನಡ ಸತ್ಯವೇದವು C.L. Bible (BSI)11 ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.