Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:13 - ಕನ್ನಡ ಸತ್ಯವೇದವು C.L. Bible (BSI)

13 ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:13
39 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.


ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು