Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:18 - ಕನ್ನಡ ಸತ್ಯವೇದವು C.L. Bible (BSI)

18 ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:18
21 ತಿಳಿವುಗಳ ಹೋಲಿಕೆ  

ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.


ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು