Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:21 - ಕನ್ನಡ ಸತ್ಯವೇದವು C.L. Bible (BSI)

21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ದೇವಭಕ್ತರೊಂದಿಗೆ ಯುದ್ಧಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:21
12 ತಿಳಿವುಗಳ ಹೋಲಿಕೆ  

ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.


ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು