Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ನ್ಯಾಯಸಭೆಯು ಕೂತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “‘ಆಮೇಲೆ ಏನಾಗಬೇಕೆಂಬುದನ್ನು ನ್ಯಾಯಸಭೆಯು ನಿರ್ಣಯಿಸುವುದು. ಆ ರಾಜನ ಅಧಿಕಾರವನ್ನು ಕಸಿದುಕೊಳ್ಳಲಾಗುವುದು. ಅವನ ಸಾಮ್ರಾಜ್ಯವು ಸಂಪೂರ್ಣವಾಗಿ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:26
8 ತಿಳಿವುಗಳ ಹೋಲಿಕೆ  

ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು