ದಾನಿಯೇಲ 7:27 - ಕನ್ನಡ ಸತ್ಯವೇದವು C.L. Bible (BSI)27 ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’ ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.