ದಾನಿಯೇಲ 7:9 - ಕನ್ನಡ ಸತ್ಯವೇದವು C.L. Bible (BSI)9 ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.