Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:17 - ಕನ್ನಡ ಸತ್ಯವೇದವು C.L. Bible (BSI)

17 ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:17
27 ತಿಳಿವುಗಳ ಹೋಲಿಕೆ  

“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲ.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು.


ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.


ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು