ದಾನಿಯೇಲ 8:25 - ಕನ್ನಡ ಸತ್ಯವೇದವು C.L. Bible (BSI)25 ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು. ಅಧ್ಯಾಯವನ್ನು ನೋಡಿ |