Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:4
18 ತಿಳಿವುಗಳ ಹೋಲಿಕೆ  

ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.


ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು