Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:16
33 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II


ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು