Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:17 - ಕನ್ನಡ ಸತ್ಯವೇದವು C.L. Bible (BSI)

17 ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿವಿುತ್ತವೇ ಪ್ರಸನ್ನಮುಖದಿಂದ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೋವನೇ, ನಿನ್ನ ಸೇವಕನಾದ ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕೋರಿ ಮಾಡುವ ನನ್ನ ಪ್ರಾರ್ಥನೆಯನ್ನು ಲಾಲಿಸು. ನಿನ್ನ ಪವಿತ್ರ ಸ್ಥಳಕ್ಕಾಗಿ ಒಳ್ಳೆಯದನ್ನು ಮಾಡು. ಆ ಕಟ್ಟಡವನ್ನು ನಾಶಮಾಡಲಾಗಿದೆ. ಯೆಹೋವನೇ, ಈ ಒಳ್ಳೆಯ ಕಾರ್ಯಗಳನ್ನು ನಿನ್ನ ಹಿತಕ್ಕಾಗಿ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:17
20 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ತೋರು ನಿನ್ನ ಮುಖದರ್ಶನ ಈ ದಾಸನಿಗೆ I ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು