ದಾನಿಯೇಲ 9:18 - ಕನ್ನಡ ಸತ್ಯವೇದವು C.L. Bible (BSI)18 ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ. ಅಧ್ಯಾಯವನ್ನು ನೋಡಿ |