Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:21 - ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:21
27 ತಿಳಿವುಗಳ ಹೋಲಿಕೆ  

ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:


ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಅವುಗಳಲ್ಲಿ ಒಂದನ್ನು ಬೆಳಿಗ್ಗೆ ಮತ್ತೊಂದನ್ನು ಸಂಜೆ ಸಮರ್ಪಿಸಬೇಕು.


ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.


ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.


ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.


ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.


ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು.


ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು