Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:25 - ಕನ್ನಡ ಸತ್ಯವೇದವು C.L. Bible (BSI)

25 ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:25
32 ತಿಳಿವುಗಳ ಹೋಲಿಕೆ  

ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು.


ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.


ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II


ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.


ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು