Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:26 - ಕನ್ನಡ ಸತ್ಯವೇದವು C.L. Bible (BSI)

26 ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:26
39 ತಿಳಿವುಗಳ ಹೋಲಿಕೆ  

ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ;


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.


ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.


ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.


“ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.


ರಾಷ್ಟ್ರಗಳ ಕಣ್ಣಿಗೆ ಬಾಬಿಲೋನ್ ಭೀಕರವಾಗಿಬಿಟ್ಟಿದೆ, ಸಮುದ್ರವೆ ಬಾಬಿಲೋನಿಯದ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು