Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:27 - ಕನ್ನಡ ಸತ್ಯವೇದವು C.L. Bible (BSI)

27 ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:27
43 ತಿಳಿವುಗಳ ಹೋಲಿಕೆ  

“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.


ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು