Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:4 - ಕನ್ನಡ ಸತ್ಯವೇದವು C.L. Bible (BSI)

4 ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:4
30 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು