ಧರ್ಮೋಪದೇಶಕಾಂಡ 1:15 - ಕನ್ನಡ ಸತ್ಯವೇದವು C.L. Bible (BSI)15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು. ಅಧ್ಯಾಯವನ್ನು ನೋಡಿ |