ಧರ್ಮೋಪದೇಶಕಾಂಡ 1:16 - ಕನ್ನಡ ಸತ್ಯವೇದವು C.L. Bible (BSI)16 ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿ |