Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:17 - ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:17
48 ತಿಳಿವುಗಳ ಹೋಲಿಕೆ  

“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು