Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:18 - ಕನ್ನಡ ಸತ್ಯವೇದವು C.L. Bible (BSI)

18 ಹೀಗೆ, ನೀವು ಮಾಡಬೇಕಾದ ಎಲ್ಲ ಕಾರ್ಯಗಳ ವಿಷಯದಲ್ಲೂ ಆಗಲೇ ನಿಮಗೆ ಆಜ್ಞೆಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದೇ ಸಮಯದಲ್ಲಿ, ನೀವು ಮಾಡತಕ್ಕ ಬೇರೆ ಎಲ್ಲಾ ಸಂಗತಿಗಳನ್ನೂ ನಾನು ನಿಮಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:18
9 ತಿಳಿವುಗಳ ಹೋಲಿಕೆ  

ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.


ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು