Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:19 - ಕನ್ನಡ ಸತ್ಯವೇದವು C.L. Bible (BSI)

19 “ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್‍ಬರ್ನೇಯಕ್ಕೆ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:19
13 ತಿಳಿವುಗಳ ಹೋಲಿಕೆ  

(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ


ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.


ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.


ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಆಗ ನಾನು, ‘ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಅಮೋರಿಯರ ಮಲೆನಾಡಿನ ಹತ್ತಿರಕ್ಕೆ ಬಂದಿದ್ದೀರಿ;


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಅಶೇರ್ ಕುಲದ ಮಿಕಾಯೇಲನ ಮಗ ಸೆತೂರ್


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು