Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:2 - ಕನ್ನಡ ಸತ್ಯವೇದವು C.L. Bible (BSI)

2 (ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‍ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:2
15 ತಿಳಿವುಗಳ ಹೋಲಿಕೆ  

ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.


ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


“ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.


“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.


“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.


“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು