Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:26 - ಕನ್ನಡ ಸತ್ಯವೇದವು C.L. Bible (BSI)

26 ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೂ ನೀವು ಹತ್ತಲೊಲ್ಲದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ನಿಮ್ಮ ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:26
9 ತಿಳಿವುಗಳ ಹೋಲಿಕೆ  

ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


“ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು