Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:31 - ಕನ್ನಡ ಸತ್ಯವೇದವು C.L. Bible (BSI)

31 ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:31
18 ತಿಳಿವುಗಳ ಹೋಲಿಕೆ  

ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.


ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು